Saturday, September 20, 2025

ವಿಫಲತೆಗಳ ಕುರಿತು ಮಾತನಾಡಿದ್ರೆ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಅಶ್ವತ್ಥನಾರಾಯಣ್ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಲವು ವರ್ಷಗಳಿಂದ ಅನಾನುಕೂಲಗಳನ್ನು ಎದುರಿಸಿದ ಕಂಪನಿ ಬೆಂಗಳೂರಿನ ಕುಂದುಕೊರತೆ, ವಿಫಲತೆಗಳ ಕುರಿತು ಮಾತನಾಡಿದರೆ ರಾಜ್ಯ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ್ ಟೀಕಿಸಿದ್ದಾರೆ.

ಈ ವೇಳೆ, ಉದ್ಯಮಿಗಳ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಡೋಂಟ್ ಕೇರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇಂತಹ ಕಂಪನಿಗೆ ಬೇಕಿದ್ದರೆ ಇರಿ; ಇಲ್ಲದಿದ್ದರೆ ಹೋಗಿ ಎನ್ನುವುದಾದರೆ, ಇದ್ಯಾವ ಸಂಸ್ಕೃತಿ? ಇದು ಜನಪರ ಸರ್ಕಾರದ ಮಾತುಗಳೇ? ಈ ದುರಹಂಕಾರದ ಮಾತು ಬಿಟ್ಟು, ಜನಪರವಾಗಿ ಕೆಲಸ ಮಾಡಿ ವಿಶ್ವಾಸ ಮೂಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ