ಬರ ನಿರ್ವಹಣೆಯ ಸಾಮಾನ್ಯ ಜ್ಞಾನವೂ ಸರ್ಕಾರಕ್ಕಿಲ್ಲ: ಡಾ. ನವೀನ್

ಹೊಸದಿಗಂತ ವರದಿ ಪುತ್ತೂರು:

ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳ ವಿರೋಧವಾಗಿರುವ ಕಾಂಗ್ರೆಸ್ ಸರ್ಕಾರವನ್ನು ನಿರ್ಲಕ್ಷ್ಯಿಸುವ ಕಾರ್ಯ ಲೋಕಸಭಾ ಚುನಾವಣೆಯ ಸಂದರ್ಭ ಮಾಡಬೇಕಾಗಿದೆ. ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50ಲಕ್ಷ ಕೋಟಿ ಬಿಜೆಪಿ ಸರ್ಕಾರ ನೀಡಿದೆ. ಜನರಲ್ಲಿರುವ ಕಾಂಗ್ರೆಸ್ ವಿರೋಧಿ ಮನಸ್ಥಿತಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. 312 ಮಂಡಲಗಳಲ್ಲಿ ಹೋರಾಟ ನಡೆಸಲಾಗುತ್ತಿದೆ. ಬರವನ್ನು ನಿಭಾಯಿಸುವ ಸಾಮಾನ್ಯ ಜ್ಞಾನವೂ ಸರ್ಕಾರಕ್ಕೆ ಇಲ್ಲ ಎಂದು ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು.

ಮಾಜಿ ವಾಸಕ ಸಂಜೀವ ಮಠಂದೂರು ಮಾತನಾಡಿ, 190 ತಾಲೂಕಿನಲ್ಲಿ ಬರವಿದ್ದು, ಬರ ಪೀಡಿತ ಪ್ರದೇಶಗಳ ಅಧ್ಯಯನವನ್ನು ಮಾಡಬೇಕಾದ ಸಿದ್ದರಾಮಯ್ಯ ವಿಧಾನ ಸೌಧ ದಿಂದ ಹೊರ ಬರುತ್ತಿಲ್ಲ. ಕುರ್ಚಿಯ ನಾಲ್ಕು ಕಾಲುಗಳು ಯಾವಾಗ ಅಲುಗಾಡುತ್ತದೋ ಎಂದು ತಿಳಿಯದೆ, ಮುಖ್ಯ ಮಂತ್ರಿಗಳು ಕುರ್ಚಿ ಬಿಟ್ಟು ಏಳುತ್ತಿಲ್ಲ. ದಿನಕ್ಕೆ ಇಬ್ಬರಂತೆ 170 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಂದರೆ ಬರ, ಬಿಜೆಪಿ ಅಂದರೆ ಸಮೃದ್ಧಿ ಎಂಬುದು ದೃಢವಾಗಿದೆ. ವಿದ್ಯುತ್ ಖರೀದಿಯಿಂದ ಸರ್ಕಾರ ಭ್ರಷ್ಟಾಚಾರ ಪ್ರಾರಂಭವಾಗಿದೆ. ರೈತರ ಕೃಷಿ ಸಾಲಗಳ ಬಗ್ಗೆ ಮಾಡಿದ ಘೋಷಣೆ ಇನ್ನೂ ಜಾರಿಯಾಗಿಲ್ಲ. ಕರ್ನಾಟಕ ಜನರನ್ನು ಕತ್ತಲೆಯಲ್ಲಿ ಹಾಕಿದ ಕಾಂಗ್ರೆಸ್ ಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬುಡಿಯಾರು ರಾಧಾಕೃಷ್ಣ ರೈ, ಮುಖಂಡರಾದ ಆಶಾ ತಿಮ್ಮಪ್ಪ ಗೌಡ, ಜಗನ್ನಿವಾಸ ರಾವ್, ಚನಿಲ ತಿಮ್ಮಪ್ಪ ಶೆಟ್ಟಿ, ಆರ್. ಸಿ. ನಾರಾಯಣ ಮಹೇಶ್ ಮೇನಾಲ ಮೊದಲಾದವರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!