ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ 3 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಹಾಲು ಒಕ್ಕೂಟಗಳ ಮತ್ತು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (KMF) ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೆಚ್‌ಡಿ ರೇವಣ್ಣ ತಿಳಿಸಿದ್ದಾರೆ.
ಈ ಹಿಂದೆ KMF 5 ರೂಪಾಯಿ ಹೆಚ್ಚಳ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಹಾಲು ಒಕ್ಕೂಟ ನಷ್ಟ ಸರಿದೂಗಿಸಲು ಹಾಲಿನ ದರ 5 ರೂ ಹೆಚ್ಚಳಕ್ಕೆ KMF ಬೇಡಿಕೆ ಇಟ್ಟಿತ್ತು. ಇದೀಗ 3 ರೂ ಏರಿಕೆ ಮಾಡಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ ಗೆ 3 ದರ ಹೆಚ್ಚಳ ಮಾಡಲಾಗಿದೆ ಎಂದು ಎಚ್ ಡಿ ರೇವಣ್ಣ ತಿಳಿಸಿದ್ದಾರೆ.
ಇದೀಗ ಆಗಸ್ಟ್ 1ರಿಂದಲೇ ಜಾರಿಗೆ ಬರುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳವಾಗಿದೆ.
ಸಿಎಂ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಪಶುಸಂಗೋಪನೆ ಸಚಿವ ವೆಂಕಟೇಶ್, ಸಹಕಾರ ಸಚಿವ ರಾಜಣ್ಣ, KMF ಅಧ್ಯಕ್ಷ ಭೀಮಾ ನಾಯಕ್ ಸೇರಿ ಹಲವು ನಾಯಕರು ಭಾಗವಹಿಸಿದ್ದರು.