ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ 18 ಸಾವಿರದ 500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಿಗೆ ೧೩ ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು ೫ ಸಾವಿರದ ೮೦೦ ಶಿಕ್ಷಕರ ನೇಮಕವಾಗಲಿದೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು ಎಂದು ಹೇಳಿದ್ದಾರೆ.
ಮೂರು ಹಂತದ ಪರೀಕ್ಷಾ ಪದ್ಧತಿಯೂ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ ೨ನೆ ಸ್ತರ ಹಾಗೂ ೩ನೆ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ ೧೧ ಸಾವಿರದ ೬೦೦೦ ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲಿಯೂ ೫೬ ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ ಎಂದು ತಿಳಿಸಿದ್ದಾರೆ