ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಜಾರಿಗೊಳಿಸಿದ ಸರ್ಕಾರ

ಹೊಸದಿಗಂತ ವರದಿ ಕಾಸರಗೋಡು:

ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ರಾಜ್ಯ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬಾವಲಿಗಳ ಸಂತಾನಾಭಿವೃದ್ಧಿಯ ಅವಧಿ ಆರಂಭವಾಗಿದ್ದು, ಈ ವೇಳೆ ರೋಗ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಅಂಗವಾಗಿ ಮೇ 12ರಂದು ಅರಣ್ಯ ಮತ್ತು ಪಶುಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ನಿಫಾ ವೈರಸ್, ಬಾವಲಿಗಳ ಜೊಲ್ಲಿನಿಂದ ಸಂತಾನೋತ್ಪತ್ತಿ ಅವಧಿಯಲ್ಲಿ ಹರಡುತ್ತದೆ. ಹಿಂದಿನ ವರ್ಷ ಈ ಸಮಯಕ್ಕೆ ಕೇರಳದಲ್ಲಿ ಏಕಾಏಕಿ ನಿಫಾ ವೈರಸ್ ಸೋಂಕು ವರದಿಯಾಗಿತ್ತು. ಆದ್ದರಿಂದ ಈ ಬಾರಿ ಅಂತಹ ಆರೋಗ್ಯ ಸಮಸ್ಯೆ ಮರುಕಳಿಸದಂತೆ ಜನರು ಎಚ್ಚರಿಕೆ ವಹಿಸಬೇಕು. ಇದಕ್ಕಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಅರೋಗ್ಯ ಇಲಾಖೆಯು ಜನರಿಗೆ ತಿಳಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಛಾಯಾಚಿತ್ರ ಪ್ರದರ್ಶನವನ್ನೂ ಆಯೋಜಿಸಲು ನಿರ್ಧರಿಸಲಾಗಿದೆ.

ನಿಫಾ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರ ಮೇಲೆ ಗರಿಷ್ಠ ನಿಗಾ ವಹಿಸಿ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿರುವುದಾಗಿ ಆರೋಗ್ಯ ಇಲಾಖೆಯು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!