ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಗನವಾಡಿಗಳಲ್ಲಿ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಿಸಿದ್ದು ಈ ಬಗ್ಗೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.
ಹೊಳೆನರಸೀಪುರದ ಲಕ್ಷ್ಮೀಪುರ ಗ್ರಾಮದ ಅಂಗನವಾಡಿಯಲ್ಲಿ ಗರ್ಭಿಣಿ ಹಾಗೂ ಮಕ್ಕಳಿಗೆ ಕೊಳೆತ ಮೊಟ್ಟೆಗಳನ್ನು ನೀಡಲಾಗಿದೆ, ಬೇಯಿಸಿದ ಕೊಳೆತ ಮೊಟ್ಟೆ ವಿತರಣೆ ಮಾಡಿದ್ದು, ಈ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು.
ಕೊಳೆತ ಮೊಟ್ಟೆ ನೀಡಿದ್ದರ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದು, ವಿತರಕರ ವಿರುದ್ಧ ಕಠಿಣ ಕ್ರಮಕ್ಕ ಆಗ್ರಹಿಸಿದ್ದರು. ಮಕ್ಕಳಿಗೆ ಕೊಳೆತ ಮೊಟ್ಟೆ ಒಳ್ಳೆಯ ಮೊಟ್ಟೆ ವ್ಯತ್ಯಾಸ ತಿಳಿಯುವುದಿಲ್ಲ. ಆರೋಗ್ಯದಲ್ಲಿ ಹೆಚ್ಚು ಕಡಿಮೆ ಆದರೆ ಏನು ಮಾಡಲು ಸಾಧ್ಯ ಎಂದು ಪ್ರತಿಭಟಿಸಿದ್ದರು.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಕಳಪೆ ಮೊಟ್ಟೆ ಸರಬರಾಜು ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ. ಸಪ್ಲೈ ಲಿಸ್ಟ್‌ನಿಂದ ಕೈಬಿಡಲಾಗುತ್ತದೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಲಿದೆ ಎಂದಿದ್ದಾರೆ.