ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ನಿಷೇಧದ ಆದೇಶ ಹಿಂಪಡೆದ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೊಳಪಡುವ ಎಲ್ಲ ವಸತಿ ಶಾಲೆ ಹಾಗೂ ವಸತಿ ಕಾಲೇಜುಗಳಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂಬ ಸರಕಾರದ ಆದೇಶಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಹೊರಡಿಸಿದ್ದ ಆದೇಶವನ್ನು ಕೆಲವೇ ಗಂಟೆಗಳಲ್ಲಿ ವಾಪಸ್ ಪಡೆಯಲಾಗಿದೆ.

ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿದ್ದು, ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಹಾಗೂ ವಸತಿ ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ ,ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸುವ ಬಗ್ಗೆ ಹೊರಡಿಸಲಾಗಿರುವ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಲಾಗಿದೆ ಎಂದು ತಿಳಿಸಿದೆ .

ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ರಾಷ್ಟ್ರೀಯ ಮತ್ತು ನಾಡಿನ ಗಣ್ಯ ವ್ಯಕ್ತಿಗಳ ಜಯಂತಿಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಆದೇಶ ಹೊರಡಿಸಲಾಗಿತ್ತು. ಈ ಮೂಲಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೊಳಪಡುವ ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಸೂಚಿಸಲಾಗಿತ್ತು.ಆದರೆ, ಇದಕ್ಕೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವೇ ಗಂಟೆಗಳಲ್ಲಿ ಇದನ್ನು ಹಿಂಪಡೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!