ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ಕಾರ ರಾಜ್ಯವನ್ನು ಸಾಲದಲ್ಲಿ ಮುಳುಗಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಆರೋಪಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದಂತೆ ನಾವು ಬೇಕಾಬಿಟ್ಟಿಯಾಗಿ ಸಾಲ ಪಡೆದು ಆಡಳಿತ ನಡೆಸುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮತ್ತು ಸಾಲ ಪಡೆಯುವ ಮೇಲೆ ನಿಯಂತ್ರಣ ಹೇರಲು ಜಾರಿಗೊಳಿಸಲಾಗಿರುವ ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದ ಅಡಿಯಲ್ಲೇ ರಾಜ್ಯ ಬಜೆಟ್ ರೂಪಿಸಲಾಗಿದೆ ಎಂದರು.
ಕೊರತೆ ಬಜೆಟ್ ಮಂಡಿಸಬಾರದು, ಹಣಕಾಸು ಕೊರತೆ ಹಾಗೂ ಸಾಲದ ಮಿತಿ ರಾಜ್ಯದ ಜಿಡಿಪಿಯ ಶೇ.25ಕ್ಕಿಂತ ಕಡಿಮೆ ಪ್ರಮಾಣದ ಸಾಲ ಪಡೆಯಬೇಕು ಎಂಬ ಮಾನದಂಡವಿದೆ. ಅದರಲ್ಲಿ ಈ ಬಾರಿ ಕೊರತೆ ಬಜೆಟ್ ಮಂಡಿಸಲಾಗಿದೆ. ಅದನ್ನು ಹೊರತುಪಡಿಸಿದರೆ ಉಳಿದೆರಡು ಅಂಶಗಳನ್ನು ಪಾಲಿಸಲಾಗಿದೆ. ವಿರೋಧ ಪಕ್ಷಗಳು ಸುಮ್ಮನೆ ಟೀಕೆ ಮಾಡುವುದನ್ನು ಬಿಟ್ಟು, ಜನರಿಗೆ ಸತ್ಯ ಹೇಳಲಿ ಎಂದರು.