ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
“ಟೋಯಿಂಗ್ ಮರು ಪ್ರಾರಂಭದ ಹಿಂದೆ ವಸೂಲಿ ಉದ್ದೇಶ ಕಾಣಿಸುತ್ತಿದೆ ಎಂದು ನಿಖಿಲ್ ಆರೋಪ ಮಾಡಿದ್ದಾರೆ. ಬೆಂಗಳೂರು ನಗರ ವಾಸಿಗಳಿಗೆ ಕಿರಿಕಿರಿ ಮಾಡುತ್ತಿದ್ದ ಟೋಯಿಂಗ್ ಪ್ರಕ್ರಿಯೆಯನ್ನು ಜನಾಕ್ರೋಶದ ಮೇರೆಗೆ 2022ರಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ಮರು ಆದೇಶ ಮಾಡಿದ್ದಾರೆ. ಮೂಲಭೂತ ಸೌಕರ್ಯಗಳನ್ನು ಕೊಡದೇ ಜನರನ್ನು ಸತಾಯಿಸುತ್ತಿರುವ ಕಾಂಗ್ರೆಸ್ ಸರ್ಕಾರ ದಿಕ್ಕೆಟ್ಟು ಆದಾಯದ ಮೂಲಗಳನ್ನು ಹುಡುಕುತ್ತಿರುವುದು ಸ್ಪಷ್ಟವಾಗಿದೆ” ಎಂದು ಕಿಡಿಕಾರಿದ್ದಾರೆ.