ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನೋಂದಣಿಯಾಗದ ಹೋಟೆಲ್‌ಗಳು, ಹೋಂಸ್ಟೇಗಳು ಮತ್ತು ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶುಕ್ರವಾರ ಸಂಜೆ ಸಭೆ ನಡೆಸಿದ್ದು, ನೋಂದಾವಣಿಯಾಗದ ಎಲ್ಲಾ ಹೋಟೆಲ್, ಹೋಂ ಸ್ಟೇಗಳು ಮತ್ತು ರೆಸಾರ್ಟ್ ಗಳನ್ನು ಬಂದ್ ಮಾಡಲು ಹಾಗೂ ಈ ಅಂಶವನ್ನು ತನ್ನ ನೀತಿಯಲ್ಲಿ ಅಳವಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಇಲಾಖೆಯಲ್ಲಿ ಇದುವರೆಗೂ 3000 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, 2000 ಹೋಟೆಲ್, ರೆಸಾರ್ಟ್, ಹೋಂಸ್ಟೇಗಳು ಇಲಾಖೆಯ ವ್ಯಾಪ್ತಿಗೆ ಬಂದಿಲ್ಲ. ಅವೆಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ನೋಂದಣಿ ಕುರಿತು ಮಾರ್ಗಸೂಚಿಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು. ಕೆಲವೆಡೆ ಅಕ್ರಮ ಚಟುವಟಿಕೆ, ಅತಿಕ್ರಮಣದ ಬಗ್ಗೆಯೂ ದೂರುಗಳು ಬಂದಿವೆ. ಅವೆಲ್ಲವನ್ನೂ ಬಂದ್ ಮಾಡಿಸಲಾಗುವುದು ಎನ್ನಲಾಗಿದೆ.