ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರಿನ ದರ ಏರಿಕೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನೀರಿನ ದರ ಹೆಚ್ಚು ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ ಇನ್ನೂ ಏರಿಕೆ ಮಾಡಿಲ್ಲ. ಸುಮಾರು ವರ್ಷಗಳಿಂದ ನೀರಿನ ದರ ಏರಿಕೆ ಆಗಿಲ್ಲ. ಹಾಗಾಗಿ ನೀರಿನ ದರ ಏರಿಕೆ ಮಾಡುತ್ತಿದ್ದೇವೆ ಎಂದರು.
ಬಸ್ ದರ ಏರಿಕೆ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿ, ನಿಗಮದಲ್ಲಿ ಕಷ್ಟದ ಪರಿಸ್ಥಿತಿ ಇದೆ. ಅದಕ್ಕೆ ಆ ರೀತಿ ಸಚಿವರು ಮಾತನಾಡಿರಬಹುದು ಅಂತ ಅಂದುಕೊಳ್ತೇನೆ. ನೋಡುತ್ತೇವೆ, ನಾವು ಇನ್ನು ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.