ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಹಾವಳಿಯನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯ ಬಳಿಕ ಅವರು, ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಮುಖ್ಯಮಂತ್ರಿ ಅವರು ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ತಾವು ಸಭೆ ನಡೆಸಿದ್ದು, ಕೈಗೊಳ್ಳಬೇಕಾದ ಅಗತ್ಯಈ ಕ್ರಮಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು. ರಾಜ್ಯದ ಪೊಲೀಸರು ಉಳಿದ ರಾಜ್ಯಗಳ ಪೊಲೀಸರಿಗಿಂತ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೆಂದು ಸುಮ್ಮನೆ ಇರದೇ ಮತ್ತಷ್ಟು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ನ್ಯಾಯಮೂರ್ತಿ ಕುನ್ಹಾ ಸಮಿತಿ ಹಾಗೂ ಹಿರಿಯ ಅಧಿಕಾರಿ ಮಹೇಶ್ವರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸ್ಸುಗಳ ಅನ್ವಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದೆ. ಮಾರ್ಚ್ ನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಾವಳಿಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಅವರು ಷರತ್ತುಗಳನ್ನು ಈಡೇರಿಸಿರುವುದನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಖಚಿತ ಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.


