7 ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾತ್ರೋ ರಾತ್ರಿ ಬರೋಬ್ಬರಿ 35 ಐಪಿಎಸ್​ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಇದೀಗ 7 ಜನ ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

35 ಜನ ಐಪಿಎಸ್​ ಅಧಿಕಾರಿಗಳಲ್ಲಿ ಇದೀಗ 7 ಅಧಿಕಾರಿಗಳಿಗೆ ತಡೆ ನೀಡಿದೆ. ಅಕ್ಷಯ್​ ಮಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್​, ಶೇಖರ್​ ಟೆಕ್ಕಣನವರ್​, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್​ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಜೊತೆಗೆ ಸಂಜೀವ್ ಪಾಟೀಲ್ ವರ್ಗಾವಣೆಗೂ ರಾಜ್ಯ ಸರ್ಕಾರ ತಡೆ ನೀಡಿದ್ದು, ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!