ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರ, ವಿರೋಧದ ಚರ್ಚೆ ನಡುವೆಯೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ಜಾತಿವಾರು ಜನಗಣತಿ ವರದಿ ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ಸರ್ಕಾರ ರಚನೆಯಾದ ನಂತರ ಹಲವು ಬಾರಿ ಕ್ಯಾಬಿನೆಟ್ ಸಭೆಯಲ್ಲಿ ವರದಿ ಮಂಡನೆಯಾಗಲಿದೆ ಎಂಬ ವಿಚಾರ ಮುನ್ನೆಲೆಗೆ ಬಂದಿತ್ತು. ಆದರೆ ಈಗ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಜಾತಿವಾರು ಜನಗಣತಿ ವರದಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ವರದಿಯನ್ನು ಮಂಡಿಸಿ ಚರ್ಚೆ ನಡೆಸಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಸಿದ್ಧತೆ ಮಾಡಿದ್ದಾರೆ.