ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸರ್ಕಾರ ಗುರುವಾರ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ, 2024 ನ್ನು ಮಂಡಿಸಿದ್ದು, 1995ರ ವಕ್ಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.
ವಕ್ಫ್ (ತಿದ್ದುಪಡಿ) ಮಸೂದೆ, 2024 ನ್ನು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಇಂದು ಮಂಡಿಸಿದರು.
ರಾಜ್ಯ ವಕ್ಫ್ ಬೋರ್ಡ್‌ಗಳ ಅಧಿಕಾರಗಳು, ವಕ್ಫ್ ಆಸ್ತಿಗಳ ನೋಂದಣಿ ಮತ್ತು ಸಮೀಕ್ಷೆ ಮತ್ತು ಅತಿಕ್ರಮಣಗಳನ್ನು ತೆಗೆದುಹಾಕುವುದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮಸೂದೆಯು ಸಹಾಯವಾಗುತ್ತದೆ.
ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದರಾದ ಕೆಸಿ ವೇಣುಗೋಪಾಲ್ ಮತ್ತು ಹೈಬಿ ಈಡನ್ ಅವರು ವಕ್ಫ್ ಮಂಡಳಿಗಳ ಕಾನೂನು ತಿದ್ದುಪಡಿ ಮಸೂದೆಯನ್ನು ಮಂಡಿಸುವುದನ್ನು ವಿರೋಧಿಸಿ ನೋಟಿಸ್ ನೀಡಿದ್ದರು.
ಇದು ಕಠಿಣ ಕಾನೂನು ಮತ್ತು ಸಂವಿಧಾನದ ಮೇಲಿನ ಮೂಲಭೂತ ದಾಳಿಯಾಗಿದೆ ಎಂದು ವೇಣುಗೋಪಾಲ್ ಹೇಳಿದರು.