ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವುದು ನಿಜ. ಆದರೆ, ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಪರಿಸ್ಥಿತಿ ಇನ್ನೂ ಇಲ್ಲ ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.
ಡೆಂಗ್ಯೂ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಬಿಜೆಪಿ ನಾಯಕರು ಹೇಳ್ತಿದ್ದಾರೆ ಆದರೆ ಅಂಥ ಪರಿಸ್ಥಿತಿ ನಮ್ಮ ರಾಜ್ಯದಲ್ಲಿಲ್ಲ. ಡೆಂಗ್ಯೂ ಕಡಿಮೆ ಇದೆ ಎಂದು ಹೇಳೋದಿಲ್ಲ. ಹೆಚ್ಚಾಗ್ತಾ ಇದೆ ನಿಜ, ಅದನ್ನು ಕಡಿಮೆ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಂಸದ ಡಾ.ಸಿ.ಎನ್. ಮಂಜುನಾಥ್ ಅವರೊಂದಿಗೂ ನಾನೇ ಖುದ್ದಾಗಿ ಮಾತನಾಡಿ ಸಲಹೆ ಪಡೆದಿದ್ದೇನೆ. ಜೊತೆಗೆ ಸೊಳ್ಳೆ ನಿಯಂತ್ರಣಾ ಕ್ರಮ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.