ಹೊಸದಿಗಂತ ವರದಿ ರಾಮನಗರ:
ಉಚಿತ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ ಎಂದು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ತಿಳಿಸಿದರು.
ನಗರದಲ್ಲಿ ವಿಕಲಚೇತನರ ಪ್ರತಿಭಟನೆ ನಿಮಿತ್ತ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೇಕೋ ಬೇಡ್ವೋ ನಾವು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ ಆದರೆ, ಈಗ ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ಹಣ ನೀಡಬೇಕು. ಕೊಡದಿದ್ದರೆ ಅವರೂ ಪ್ರತಿಭಟನೆ ಮಾಡುತ್ತಾರೆ. ಒಂದು ವೇಳೆ ಗ್ಯಾರಂಟಿಗಳನ್ನು ನಿಲ್ಲಿಸಿದರೆ, ಜನರು ಪ್ರತಿಭಟನೆ ನಡೆಸುತ್ತಾರೆ. ಗ್ಯಾರಂಟಿಗಳು ಇಲ್ಲದಿದ್ರೆ ನಮಗೆ ಇದೆಲ್ಲ ಸಮಸ್ಯೆಯೇ ಆಗುತ್ತಿರಲಿಲ್ಲ, ಹೇಗೋ ನಿರ್ವಹಿಸುತ್ತಿದ್ದೆವು. ಈಗ ಈ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ:
ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಇವೆಲ್ಲಾ ಸಮಸ್ಯೆಗಳೇ ಆಗುತ್ತಿರಲಿಲ್ಲ. ಸರ್ಕಾರದ ಮುಂದೆ ಹಲವು ಸವಾಲುಗಳಿದ್ದು, ಬಜೆಟ್ ಮಿತಿಗಳೊಳಗೆ ಎಲ್ಲವನ್ನೂ ನಿರ್ವಹಿಸಬೇಕಿದೆ. ನೌಕರರಿಗೆ ಸಂಬಳ, ಅಭಿವೃದ್ಧಿ ಕಾರ್ಯಗಳು ಮತ್ತು ರೈತರಿಗೆ ನೆರವು ಸೇರಿದಂತೆ ವಿವಿಧ ವೆಚ್ಚಗಳನ್ನು ಸರ್ಕಾರ ನಿಭಾಯಿಸಬೇಕಿದೆ. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಇವೆಲ್ಲವನ್ನು ಸಮನ್ವಯಗೊಳಿಸುವುದು ಕಷ್ಟಕರವಾಗಿದೆ ಎಂದರು.



