Wednesday, August 17, 2022

Latest Posts

ಮದುವೆ ಸಮಾರಂಭಗಳ ಮೇಲೆ ಸರ್ಕಾರದ ಕಣ್ಣು: 50 ಜನರಿಂದ 40 ಕ್ಕೆ ಇಳಿಯುತ್ತಾ ಅವಕಾಶ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಸರ್ಕಾರ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ.
ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಸದ್ಯ 50 ಜನರಿಗೆ ಮಾತ್ರ ಸರ್ಕಾರ ಅನುಮತಿ ನೀಡಿದ್ದ ಸರಕಾರ ಇದೀಗ 40 ಕ್ಕೆ ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಹೌದು, ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಸರ್ಕಾರ ಕೇವಲ 40 ಮಂದಿಗಷ್ಟೇ ಅವಕಾಶ ನೀಡಿ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ ಎನ್ನಲಾಗಿದೆ.
ಸದ್ಯದಲ್ಲೇ ಮದುವೆ ಸಮಾರಂಭಗಳ ಮೇಲೆ ಸರ್ಕಾರ ಕಣ್ಣಿಡಲಿದ್ದು, ಸಮುದಾಯ ಭವನ, ಹಾಲ್, ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಸರ್ಕಾರ ನಿರ್ಬಂಧ ಹೇರಲಿದೆ. ಕೇವಲ ಮನೆಗಳಲ್ಲಿ ಮಾತ್ರ ಮದುವೆ ಸಮಾರಂಭ ನಡೆಸಲು ಸರ್ಕಾರ ಪರಿಷ್ಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!