ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಹಲವು ಲೋಪದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.
ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ.