ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಮಫಲಕಗಳಲ್ಲಿ ಕನ್ನಡ ಬಳಕೆ ಕುರಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.
ವಿಧಾನಸಭೆಯಲ್ಲಿ ಇದರ ಬಗೆಗಿನ ಅಂಗೀಕಾರ ಪಡೆಯಿರಿ ಎಂದು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಮ್ಮ ಸರ್ಕಾರ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎನ್ನುವ ಸುಗ್ರೀವಾಜ್ಞೆ ಹೊರಡಿಸಿದ್ದೆವು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಬದಲಾಗಿ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಎಂದು ಹೇಳಿದ್ದಾರೆ ಎಂದಿದ್ದಾರೆ.
ಜನವರಿ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿ ಸೂಚನಾ ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ’ಗೆ ತಿದ್ದುಪಡಿ ತರಲು ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿತ್ತು