ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹೆಸರು ಇಂದು ಘೋಷಣೆಯಾಗಬೇಕಿತ್ತು. ಆದರೆ ಏಕಾಏಕಿ ಮಹಾಯುತಿ ಸಭೆ ರದ್ದಾಗಿದೆ.
ಸಭೆಯನ್ನು ರದ್ದುಗೊಳಿಸಲು ಕಾರಣ ಇನ್ನೂ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯ ಗುಂಪು ನಾಯಕನನ್ನು ಆಯ್ಕೆ ಮಾಡಲಾಗುವುದು, ನಂತರ ಮಹಾಮೈತ್ರಿಕೂಟ ಸಭೆ ಪ್ರಾರಂಭವಾಗಬಹುದು ಎನ್ನಲಾಗಿದೆ.
ಮಾಹಿತಿ ಪ್ರಕಾರ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಸತಾರಾದಲ್ಲಿರುವ ತಮ್ಮ ಗ್ರಾಮಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.