ಹೊಸದಿಗಂತ ಡಿಜಿಟಲ್ ಡೆಸ್ಕ್ :
ಡಬ್ಲ್ಯೂಡಬ್ಲ್ಯೂಇ (WWE ) ಖ್ಯಾತಿಯ ‘ದಿ ಗ್ರೇಟ್ ಖಲಿ’ ಇಂದು ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್ ಎಸ್ ಎಸ್ ಪ್ರಧಾನ ಕಚೇರಿಯ ಭೇಟಿದರು.
ಈ ವೇಳೆ ಅವರು ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ವಂದಿಸಿದರು.
ಈ ಕುರಿತು ಆರ್ ಎಸ್ ಎಸ್ ಪ್ರಚಾರ ವಿಭಾಗವಾದ ವಿಶ್ವ ಸಂವಾದ್ ಕೇಂದ್ರ ತನ್ನ ಫೇಸ್ಬುಕ್ ಪುಟದಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.
ದಿವಂಗತ ಆರ್ ಎಸ್ ಎಸ್ ಮುಖ್ಯಸ್ಥ ಡಾ. ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಸ್ಮಾರಕಕ್ಕೆ ದಿ ಗ್ರೇಟ್ ಖಲಿ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿರುವುದಾಗಿ ತಿಳಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ