October 24, 2026
Saturday, October 24, 2026
spot_img

ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಗಾಢ ನಿದ್ರೆಯಲ್ಲಿದ್ದ ಜನತೆ ಆತಂಕದಿಂದ ಬೆಚ್ಚಿಬಿದ್ದಿದ್ದಾರೆ. ಬೆಳಗಿನ ಜಾವ ಸುಮಾರು 3:01ರ ವೇಳೆಗೆ ಇದ್ದಕ್ಕಿದ್ದಂತೆ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ, ಜನರು ಜೀವಭಯದಿಂದ ತಮ್ಮ ಮನೆಗಳಿಂದ ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ.

42 ಸೆಕೆಂಡ್‌ಗಳ ಕಾಲ ಕಂಪಿಸಿದ ಭೂಮಿ

ದೊಡ್ಡಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಹಾಗೂ ತೂಬಗೆರೆ ಹೋಬಳಿಯ ತಿಮ್ಮೊಜನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಭೂಕಂಪನದ ಅನುಭವ ತೀವ್ರವಾಗಿತ್ತು. ಸತತ 42 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 2.9 ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗರ್ಭದ ಸುಮಾರು 5 ಕಿಲೋಮೀಟರ್ ಆಳದಲ್ಲಿ ಈ ಭೂಕಂಪನ ಪ್ರಕ್ರಿಯೆ ಸಂಭವಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ಜನರಲ್ಲಿ ಮನೆಮಾಡಿದ ಆತಂಕ

ಕಳೆದ ಎರಡು ದಿನಗಳಿಂದಲೂ ತೂಬಗೆರೆ ಹೋಬಳಿಯ ವ್ಯಾಪ್ತಿಯಲ್ಲಿ ಲಘು ಭೂಕಂಪನದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ದುಪ್ಪಟ್ಟಾಗಿದೆ. ಮಧ್ಯರಾತ್ರಿ ಸಂಭವಿಸಿದ ಈ ಘಟನೆಯಿಂದಾಗಿ ಜನರು ಮರಳಿ ಮನೆಗೆ ಹೋಗಲು ಹೆದರಿ, ಬೆಳಗ್ಗೆವರೆಗೂ ರಸ್ತೆಗಳಲ್ಲೆ ಇರುವಂತಾಯಿತು. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ ಎಂದು ತಿಳಿದು ಬಂದಿದೆ.

Must Read

Skip to toolbar