ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಗಾಢ ನಿದ್ರೆಯಲ್ಲಿದ್ದ ಜನತೆ ಆತಂಕದಿಂದ ಬೆಚ್ಚಿಬಿದ್ದಿದ್ದಾರೆ. ಬೆಳಗಿನ ಜಾವ ಸುಮಾರು 3:01ರ ವೇಳೆಗೆ ಇದ್ದಕ್ಕಿದ್ದಂತೆ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ, ಜನರು ಜೀವಭಯದಿಂದ ತಮ್ಮ ಮನೆಗಳಿಂದ ತಕ್ಷಣವೇ ಹೊರಗೆ ಓಡಿ ಬಂದಿದ್ದಾರೆ. 42 ಸೆಕೆಂಡ್‌ಗಳ ಕಾಲ ಕಂಪಿಸಿದ ಭೂಮಿ ದೊಡ್ಡಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಹಾಗೂ ತೂಬಗೆರೆ ಹೋಬಳಿಯ ತಿಮ್ಮೊಜನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಭೂಕಂಪನದ ಅನುಭವ ತೀವ್ರವಾಗಿತ್ತು. … Continue reading ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ