Thursday, August 11, 2022

Latest Posts

ಹಾರಂಗಿ ಜಲಾಶಯ ಬಹುತೇಕ ಭರ್ತಿ: ಬಾಗಿನ ಅರ್ಪಿಸಿದ ಜನಪ್ರತಿನಿಧಿಗಳು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ವರದಿ ಕುಶಾಲನಗರ:

ಹಾರಂಗಿ ಜಲಾಶಯ ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ಬಾಗಿನ ಅರ್ಪಿಸಿದರು.
ರಾಜ್ಯದಲ್ಲೇ ಪ್ರಥಮವಾಗಿ ಹಾರಂಗಿ ಅಣೆಕಟ್ಟು ಭರ್ತಿಯಾಗಿದ್ದು, ಸಚಿವ ವಿ ಸೋಮಣ್ಣ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ , ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ.ಅಪ್ಪಚ್ಚು ರಂಜನ್, ಅರಕಲಗೂಡು ಶಾಸಕ ಎ. ಟಿ. ರಾಮಸ್ವಾಮಿ ಪಿರಿಯಾಪಟ್ಟಣ ಶಾಸಕ ಮಹದೇವ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಹ್ಮಣ್ಯ, ಹಾಸನದ ವಿಧಾನ ಪರಿಷತ್ ಸದಸ್ಯ ಗೋಪಾಲ ಸ್ವಾಮಿ ಸೇರಿದಂತೆ ಇಲಾಖೆಯ ಮುಖ್ಯಸ್ಥರ ಸಮ್ಮುಖದಲ್ಲಿ ಮೊದಲು ಅಣೆಕಟ್ಟೆಯ ಮುಂಭಾಗದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.
ನಂತರ ಸಚಿವ ಸೋಮಣ್ಣ, ಲೋಕಸಭಾ ಸದಸ್ಯರು, ಶಾಸಕರುಗಳು, ತುಂಬಿರುವ ಹಾರಂಗಿ ನದಿಗೆ ಪೂಜೆ ಸಲ್ಲಿಸಿ ನಾಲ್ಕು ಬಾಗಿನಗಳನ್ನು ಸಮರ್ಪಿಸಿದರು.
ಬಳಿಕ ಅಣೆಕಟ್ಟೆಯ ಹೆಚ್ಚುವರಿ ನೀರನ್ನು ನದಿಗೆ ಹರಿಸಲು ಅಣೆಕಟ್ಟೆಯ ಕ್ರೆಸ್ಟ್ ಗೇಟ್ ಗಳನ್ನು ಬಟನ್‌ ಒತ್ತುವ ಮೂಲಕ ತೆರೆದರು.
ಇದೀಗ ಅಣೆಕಟ್ಟೆಯಿಂದ ಮುಖ್ಯ ಬಾಗಿಲುಗಳ ಮೂಲಕ 6,000 ಕ್ಯುಸೆಕ್ ಹಾಗೂ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 2000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಈ ಸಂದರ್ಭ ಜನಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಕಾವೇರಿ ನೀರಾವರಿ ನಿಗಮದ ಅಭಿಯಂತರ ಚನ್ನಕೇಶವ ಸಹಾಯಕ ಅಭಿಯಂತರ ಮಂಜುನಾಥ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್, ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಬಳಿಕ ಸಚಿವರ ಅಧ್ಯಕ್ಷತೆಯಲ್ಲಿ ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಮುಂಗಾರು ಹಂಗಾಮಿನ ಬೆಳೆಗೆ ನೀರು ಒದಗಿಸುವ ಸಂಬಂಧ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss