ಶರಣಬಸವೇಶ್ವರ ಸಂಸ್ಥಾನದ ಪೂಜ್ಯ ಡಾ.ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರ

ಹೊಸದಿಗಂತ ಕಲಬುರಗಿ:

ಶುಕ್ರವಾರ ರಾತ್ರಿ ಉಸಿರಾಟದ ಸೋಂಕಿನ ದೂರುಗಳೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಶೀಘ್ರವಾಗಿ ಸಾಮಾನ್ಯ ಸ್ಥಿತಿಗೆ ಚೇತರಿಸಿಕೊಳ್ಳುತ್ತಿದೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದ್ದಾರೆ.

ಈ ಕುರಿತು ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಡಾ.ಅಪ್ಪಾಜಿ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ತಂಡವು ಅವರ ಒಟ್ಟಾರೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಉಸಿರಾಟದ ಸೋಂಕು ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಪೂಜ್ಯ ಡಾ. ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದರಿಂದ ಶರಣಬಸವೇಶ್ವರ ಸಂಸ್ಥಾನದ ಭಕ್ತರು ಭಯಭೀತರಾಗಬಾರದು ಮತ್ತು ಡಾ. ಅಪ್ಪಾಜಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹರಡಿರುವ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!