ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಹಿರಿಯ ಕವಿ , ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ ಎಂದು ಧಾರವಾಡದ ಎಸ್ ಡಿಎಂ ಆಸ್ಪತ್ರೆ ತಿಳಿಸಿದೆ.
ಇಂದು ಎಸ್ಡಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಪ್ರಕಾರ, ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ.
ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿರುವ ಕಾರಣ ಉಸಿರಾಡಲು ತೊಂದರೆಯಾಗುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಜೊತೆಗೆ ಅವರು ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಬಳಲುತ್ತಿದ್ದು, . ಕಳೆದ 2 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿಚಿಕಿತ್ಸೆ ನೀಡಲಾಗುತ್ತಿದೆ.