ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ದಕ್ಷಿಣ ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಇಂದಿನಿಂದ ಮಾ.20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಮಯದಲ್ಲಿ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ