ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದ ಬಳಿ ತುರ್ತು ಭೂಸ್ಪರ್ಶ (Emergency Landing) ಮಾಡಿದೆ.

ತಾಂತ್ರಿಕ ಸಮಸ್ಯೆಯ ಕಾರಣ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

ಸಚಿವರು ಬೆಂಗಳೂರಿನಿಂದ ಗದಗಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು.

ಬೆಳಗ್ಗೆ 10:15ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಪೈಲಟ್ ಕೂಡಲೇ ಸುರಕ್ಷಿತವಾಗಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!