ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.
ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ ನಾಯಕಿ ಸುಷ್ಮಾ ಅಂಧಾರೆಯನ್ನು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಕರೆದೊಯ್ಯಲು ಹೋಗುತ್ತಿತ್ತು.
ಬೆಳಗ್ಗೆ 9.30ರ ಸುಮಾರಿಗೆ ಹೆಲಿಕಾಪ್ಟರ್‌ನ ಪೈಲಟ್‌ಗಳು ಅದನ್ನು ಮಹುಹಾದ್‌ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಪೈಲಟ್‌ಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.