ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ಸಂಪುಟ ಪುನಾರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರು. ಇನ್ನೇನು ಸಂಪುಟ ಪುನಾರಚನೆ ಆಗುತ್ತದೆ ಎಂದು ಕಾಯುತ್ತಿದ್ದವರಿಗೆ ಹೈಕಮಾಂಡ್ ತಣ್ಣೀರು ಎರಚಿದೆ.
ದೆಹಲಿಯಲ್ಲಿ ಹೈಕಮಾಂಡ್ ಮಟ್ಟದ ನಾಯಕರು ಸಭೆ ನಡೆಸಿ ಕರ್ನಾಟಕದಲ್ಲಿ ಸದ್ಯಕ್ಕೆ ಸಂಪುಟ ಪುನಾರಚನೆ ಬೇಡ ಎಂದು ಹೈಕಮಾಂಡ್ ಹೇಳಿದೆ.
ಉಳಿದಂತೆ ಖಾಲಿ ಉಳಿದಿರುವ ಸ್ಥಾನಗಳನ್ನು ತುಂಬಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೆಲವು ಸಚಿವರು ತಮ್ಮ ಖಾತೆ ನಿಭಾಯಿಸಲು ವಿಫಲರಾಗಿದ್ದು, ಅಂತಹ ಸಚಿವರ ಖಾತೆ ಅದಲು ಬದಲಾಗುವ ಸಾಧ್ಯತೆ ಇದೆ.