ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಇದೇ ವೇಳೆ ಹೈಕೋರ್ಟ್‌ಗೆ ಎಸ್‌ಪಿಪಿ ರವಿವರ್ಮ ಕುಮಾರ್ ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕ್ಯಾಮೆರಾ ವಿಚಾರಣೆಗೆ ಮನವಿ ಮಾಡಿದ್ದರು. ಇನ್ ಕ್ಯಾಮರಾ ವಿಚಾರಣೆ ಅಂದರೆ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸುವುದಾಗಿದೆ. ಇನ್ನೂ ಇನ್ ಕ್ಯಾಮೆರಾ ವಿಚಾರಣೆ ಕುರಿತು ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ನ್ಯಾ. ಎಂ.ನಾಗಪ್ರಸನ್ನರವರ ಹೈಕೋರ್ಟ್ ಪೀಠ ಪ್ರತಿಕ್ರಿಯಿಸಿದೆ.