ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಿಂದ ತನಿಖೆಗೆ ಅನುಮತಿ ನೀಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 29ಕ್ಕೆ ಮುಂದೂಡಿದೆ.
ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕ್ರಮ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.