ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ (Prajwal Revanna) ಅವರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಮುಂದೂಡಿದೆ.
ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಬೇಕಿದೆ. ಹೀಗಾಗಿ ಅಲ್ಲಿಯವರಿಗೆ ಅಸಿಂಧು ತೀರ್ಪು ತಡೆಹಿಡಿಯುವಂತೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ. ಅಲ್ಲದೇ ಅಸಿಂದು ಆದೇಶಕ್ಕೆ ತಡೆಕೋರಿ ಸಲ್ಲಿಸಿರುವ ಪ್ರಜ್ವಲ್ ರೇವಣ್ಣ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೇವರಾಜೇಗೌಡ ಪರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ.