ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರು ತಮ್ಮ ಮನೆಯಿಂದ ಹಾಸಿಗೆ, ಊಟ, ಪುಸ್ತಕ ನೀಡುವಂತೆ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ನಲ್ಲಿ ಇಂದು ನಟ ದರ್ಶನ್ ರಿಟ್ ಅರ್ಜಿ ವಿಚಾರಣೆ ನಡೆದಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ದರ್ಶನ ಪರ ವಕೀಲ ಫಣೀಂದ್ರ ವಾದ ಮಂಡಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮನೆಯಿಂದ ಊಟ ಮತ್ತು ಹಾಸಿಗೆ. ಪುಸ್ತಕವನ್ನು ಪಡೆಯಲು ಅವಕಾಶ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.