Monday, March 27, 2023

Latest Posts

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ (Teachers Recruitment) ಸಂಬಂಧಿಸಿ 1:1 ಅನುಪಾತದಲ್ಲಿ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಬಿಡುಗಡೆ ಮಾಡಿದೆ. ಆದ್ರೆ, ಇದೀಗ ಕರ್ನಾಟಕ ಹೈಕೋರ್ಟ್ (Karnataka High Court) ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಿದೆ.

ಆಯ್ಕೆ ವೇಳೆ ಶಿಕ್ಷಣ ಇಲಾಖೆ ಲೇಡಿ ಅಭ್ಯರ್ಥಿಗಳ ಪತಿಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣನೆ ಪ್ರಶ್ನಿಸಲಾಗಿತ್ತು. ಇದರಿಂದ ಹಲವು ಅಭ್ಯರ್ಥಿಗಳನ್ನು ರಿಜೆಕ್ಟ್ ಮಾಡಲಾಗಿತ್ತು. ಇದನ್ನು ವಿರೋಧಿಸಿ ನೂರಾರು ಅಭ್ಯರ್ಥಿಗಳು ರಿಟ್ ಅರ್ಜಿ ಸಲ್ಲಿಸಿದ್ದು, ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ ಅಭ್ಯರ್ಥಿ ತಂದೆಯ ಜಾತಿ, ಆದಾಯ ಪ್ರಮಾಣಪತ್ರ ಆಧರಿಸಿ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಲು ಶಿಕ್ಷಣ‌ ಇಲಾಖೆಗೆ ಆದೇಶಿಸಿದೆ.

ಈ ಮೊದಲು ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದ್ರೆ, ಇದೀಗ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೇ ರದ್ದುಗೊಳಿಸಿ ಆದೇಶಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!