ಚುನಾವಣೆ ಘೋಷಣೆ ಮುನ್ನವೇ ಸಾಮಾಗ್ರಿಗಳ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಚುನಾವಣೆ ಘೋಷಣೆ ಮುನ್ನವೇ ಚುನಾವಣಾ ಅಧಿಕಾರಿಗಳು ಸಾಮಗ್ರಿ ವಶಕ್ಕೆ ಪಡೆದಿದ್ದ ಕ್ರಮ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಮಾರ್ಚ್ 19 ರಂದು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದರು. ಇದರ ವಿರುದ್ಧ ಇಷ್ತಿಯಾಕ್ ಅಹಮದ್ ಎಂಬುವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ​, ಚುನಾವಣೆ ಘೋಷಣೆಗೆ ಮುನ್ನ ಶೋಧನೆಯ ಅಧಿಕಾರವಿಲ್ಲ. ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಆದೇಶಿಸಿದೆ.

.ಮಾರ್ಚ್ 29ರಂದು ಕೇಂದ್ರ ಚುನಾವಣೆ ಆಯೋಗವು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿತ್ತು. ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಇದು ಮೇ.10ರಂದು ಚುನಾವಣೆ ಮುಗಿಯುವವರೆಗೆ ಜಾರಿಯಲ್ಲಿರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!