ಉಚ್ಚ ನ್ಯಾಯಾಲಯದ ಆದೇಶ ಎಲ್ಲರೂ ಪಾಲಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕಲಾಪ ಸಲಹಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಪ್ರಕರಣಗಳು ವರದಿಯಾಗಿವೆ. ನೂನ್ಯತೆಗಳನ್ನು ಸರಿಪಡಿಸುವ ಕುರಿತು ಹಾಗೂ ಎಸ್.ಒ.ಪಿ.ಗಳ ಬಗ್ಗೆ ಸಭೆ ಕರೆದು ಚರ್ಚಿಸಲಾಗುವುದು. ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುವ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಪೋಷಕರ ಮೇಲಿದೆ. ಶಾಂತಿಯುತ ವಾತಾವರಣದಲ್ಲಿ ಅಂತಿಮ ತೀರ್ಪು ನೀಡಲು ಸಾಧ್ಯವಾಗಲಿದೆ. ಅಲ್ಲಿಯವರೆಗೆ ನಾವು ನಿಯಂತ್ರಣದಲ್ಲಿರಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!