ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯನ್ನು ಮಾ.27ರಿಂದ ನಡೆಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮಾ.27ಕ್ಕೆ ವಿಚಾರಣೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಕುಸ್ಮಾ ಅರ್ಜಿ ಸಲ್ಲಿಸಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ನಿರಾಕರಿಸಿದೆ. ಜೊತೆಗೆ ಪರೀಕ್ಷೆ ದಿನಾಂಕ ಮುಂದೂಡಲು ಹೈಕೋರ್ಟ್ ಒಪ್ಪಿಗೆ ಸೂಚಿಸಿಲ್ಲ.
5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮಾ.27ಕ್ಕೆ ನಿಗದಿಯಾಗಿದೆ. ಹೀಗಾಗಿ ಒಂದು ವಾರ ಪರೀಕ್ಷೆ ದಿನಾಂಕ ಮುಂಡೂಡಿಕೆಗೆ ಕುಸ್ಮಾ( ಖಾಸಗಿ ಶಾಲೆಗಳ ಸಂಘ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾ.ನರೇಂದರ್ ಹಾಗೂ ಅಶೋಕ್ ಕಿಣಗಿ ಅವರ ವಿಭಾಗೀಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.