ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ. ಇದು ಚಿತ್ರದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರಿಗೆ ಸಮಾಧಾನ ತಂದಿದೆ.
ಟಾಕ್ಸಿಕ್ ಚಿತ್ರತಂಡ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ರಾಜ್ಯ ಅರಣ್ಯ ಇಲಾಖೆಯು ಚಿತ್ರದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಮತ್ತು ಮಾನ್ಸಸ್ಟರ್ ಮೈಂಡ್ಸ್ ವಿರುದ್ಧ ದೂರು ದಾಖಲಿಸಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.