ಸುಪ್ರೀಂಕೋರ್ಟ್ ನಿಂದ ಇದೇ ವಾರ ಪ್ರಕಟವಾಗಲಿದೆ ಹಿಜಾಬ್​ ತೀರ್ಪು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿಜಾಬ್​ ನಿಷೇಧಿಸಿ ಕರ್ನಾಟಕ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇದೇ ವಾರ ಪ್ರಕಟಿಸುವ ಸಾಧ್ಯತೆ ಇದೆ.

ಪ್ರಕರಣದ ವಿಚಾರಣೆ ನಡೆಸಿದ ಪೀಠದ ಜಡ್ಜ್​ಗಳಲ್ಲಿ ಒಬ್ಬರಾಗಿದ್ದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಮುಂದಿನ ವಾರ ನಿವೃತ್ತರಾಗಲಿದ್ದು, ಅದಕ್ಕೂ ಮೊದಲೇ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ.

ನ್ಯಾಯಮೂರ್ತಿಗಳಾದ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ 10 ದಿನಗಳ ಕಾಲ ವಾದವನ್ನು ಆಲಿಸಿ ಸೆಪ್ಟೆಂಬರ್ 22 ರಂದು ಅರ್ಜಿಗಳ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿತ್ತು.ಹೀಗಾಗಿ ನ್ಯಾಯಮೂರ್ತಿ ಗುಪ್ತಾ ಅವರು ಇದೇ 16 ರಂದು ನಿವೃತ್ತರಾಗಲಿರುವುದರಿಂದ ಈ ವಾರವೇ ತೀರ್ಪು ಪ್ರಕಟವಾಗುವ ನಿರೀಕ್ಷೆಯಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!