ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ಶೀಘ್ರ ಬಂಧಿಸುವಂತೆ ಗೃಹ ಸಚಿವರಿಗೆ ಒತ್ತಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಯುವ ಪತ್ರಕರ್ತ ತೇಜ ಅವರ ಮೇಲೆ ಫ್ರೀಡಂಪಾರ್ಕ್ ಕಾರ್ಯಕ್ರಮದಲ್ಲಿ ಅಮಾನವೀಯವಾಗಿ ಹಲ್ಲೆ ನಡೆಸಿದ ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ನಾಯಕರ ನಿಯೋಗವು ಗೃಹ ಸಚಿವ ಅರಗ ಜ್ಞಾನೇಂದ್ರರವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ದಲಿತ ಮುಖಂಡರಾದ ಜಗದೀಶ್ ಯಲಹಂಕ, ವೆಂಕಟೇಶ್ , ಅಲೆಮಾರಿ ಸಮುದಾಯಗಳ ಮುಖಂಡರಾದ ಕಿರಣ್ ಕೊತ್ತಿಗೆರೆ, ಸುನೀಲ್ ಹೆಳವರ , ಲೋಹಿತಾಶ್ವ , ಅಂಜನೇಯ ಮತ್ತಿತರರು ಇದ್ದರು.
ನಿಯೋಗದ ಅಹವಾಲನ್ನು ಆಲಿಸಿದ ಸಚಿವರು, ದಲಿತ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದವರಿಗೆ ತಕ್ಕ ಪಾಠ ಕಲಿಸಲು ಸರ್ಕಾರ ಬದ್ಧವಾಗಿದೆ . ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಹಿಡಿಯಲು ಸೂಕ್ತಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!