ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಆಕೆಯ ಪತಿ ನಾಗರಾಜ್ ಕೂಡ ತಮ್ಮ ಪ್ರೀತಿಯ ಮಡದಿಯನ್ನು ಕಳೆದುಕೊಂಡು ನೋವು ಅನುಭವಿಸುತ್ತಿದ್ದಾರೆ.
ಮಡದಿಗಾಗಿ ಕವಿತೆ ಬರೆದು ಈ ಪೃಥ್ವಿಯಿಂದ ಬೀಳ್ಕೊಟ್ಟಿದ್ದಾರೆ. ಅವರು ತಮ್ಮ ಹೆಂಡತಿಯೊಂದಿಗಿನ ಕೊನೆಯ ನಿಮಿಷಗಳನ್ನು ನೆನಪಿಸುವಂತೆ ಈ ಸಾಲುಗಳನ್ನು ಬರೆದಿದ್ದಾರೆ.
ಕವಿತೆ ಸಾಲುಗಳು
ಬೆಳಗಿಕೊಂಡಿರೆಂದು
ಕಿಡಿ ತಾಕಿಸಿ ಹೊರಟಿತು
ಹೆಣ್ಣು
ಚಿತ್ತು ತೆಗೆದು
ಬತ್ತಿಯ ನೆತ್ತಿ ಚೆನ್ನಾಗಿಸಿ
ತಿರುಪಿ ತಿದ್ದಿ
ಇರು
ತುಸುವಿರೆಂದು ಕರೆದರೂ
ನಿಲ್ಲದೆಯೇ
ಬೇರಾವುದೋ ಕರೆಗೆ
ತಣ್ಣಗೆ ಓಗೊಟ್ಟ ಮೇರೆ
ಯಲ್ಲಿ
ಒಂದೇ ಒಂದು
ನಿಮಿಷ
ಬಂದೇನೆಂದು ಕಡೆಗಳಿಗೆ
ಯ ಸೆರಗಿನ ಬೆನ್ನಿನಲ್ಲಿ
ಅಂದು.
ಕಾದಿದ್ದೇನೆ
ಈಗ ಬಂದಾಳೆಂದು
ಆಗ ಬಂದಾಳೆಂದು
ಮರಳಿ
ಜೀವ ತಂದಾಳೆಂದು
ಇದು
ಮೂರನೇ ದಿವಸ
ಇಷ್ಟಾಗಿ
ಬೆಳಗಲಿಟ್ಟ ಕಿರಿಸೊಡರ
ಬೆಳಕು ನಾನು
ಉರಿವುದಷ್ಟೇ ಕೆಲಸ
ಇರುವ ತನಕ.