ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ಪತ್ನಿ (Wife) ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ತಿಳಿದ ಪತಿ ಹಾಗೂ ಅತ್ತೆ ಆಕೆಯನ್ನು ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.
ಮೃತ ಮಹಿಳೆಗೆ ಈಗಾಗಲೇ ಒಂದು ಹೆಣ್ಣು ಹಾಗೂ ವಿಕಲಚೇತನ ಗಂಡು ಮಗುವಿದ್ದು, ಮತ್ತೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಎಂದು ಹತ್ಯೆ ಮಾಡಲಾಗಿದೆ.
ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ನೇಣು ಬಿಗಿಯಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಆಕೆಯ ಪತಿ ಉದಯ್ ಚೌಹಾಣ್ ಹಾಗೂ ಆತನ ತಾಯಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳು ಅಳುವುದನ್ನು ನೋಡಿ ಸ್ಥಳೀಯರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು (Police) ಸ್ಥಳವನ್ನು ಪರಿಶೀಲನೆ ನಡೆಸಿ, ಮೃತದೇಹವನ್ನು ಪರಿಕ್ಷೆಗೆ ಕಳಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.