ಹೊಸದಿಗಂತ ಡಿಜಿಟಲ್ ಡೆಸ್ಕ್;
ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ನವ್ಯಾ (25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್ ಕೊಲೆಗೈದ ಆರೋಪಿಯಾಗಿದ್ದಾನೆ.
ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ, ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಕೆಂಗೇರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.