ಗಂಡನನ್ನು ಮರಕ್ಕೆ ಕಟ್ಟಿ ಆತನ ಎದುರೇ ಪತ್ನಿಯ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಆರೋಪಿಗಳು ವಿಹಾರಕ್ಕೆ ತೆರಳಿದ್ದ ದಂಪತಿಯನ್ನು ಸುತ್ತುವರೆದು, ಪತಿಯನ್ನು ಮರಕ್ಕೆ ಕಟ್ಟಿಹಾಕಿ ಪತ್ನಿ ಮೇಲೆ ಸಾಮೂಹಿತ ಅತ್ಯಾಚಾರ ನಡೆಸಿದ್ದಾರೆ.

ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವದಂಪತಿ ಭೈರವನಾಥ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಐವರು ಆರೋಪಿಗಳು ಪತಿಯನ್ನು ಮರಕ್ಕೆ ಕಟ್ಟಿಹಾಕಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಬೆಳಕಿಗೆ ಬಂದ ನಂತರ ರಾಜ್ಯ ರಾಜಕಾರಣದಲ್ಲಿ ಬಿಸಿ ತಟ್ಟಿದೆ. ಇನ್ನು ದೂರಿನ ನಂತರ ಪೊಲೀಸರು ವಿಷಯವನ್ನು ಮುಚ್ಚಿಟ್ಟಿದ್ದರು ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಅಲ್ಲದೆ ಆರೋಪಿಗಳು ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಅನ್ನು ವಿಡಿಯೋ ಮಾಡಿಕೊಂಡಿದ್ದು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ.

ಮಾಹಿತಿ ಪ್ರಕಾರ, ಕಾಲೇಜಿನಲ್ಲಿ ಓದುತ್ತಿದ್ದ ನವದಂಪತಿ ಈ ವರ್ಷ ವಿವಾಹವಾಗಿದ್ದರು. ಗುಢ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈರವನಾಥ ದೇವಸ್ಥಾನಕ್ಕೆ ವಿಹಾರಕ್ಕೆಂದು ತೆರಳಿದ್ದರು. ಏಕಾಏಕಿ ಐವರ ಸಂಖ್ಯೆಯಲ್ಲಿ ಬಂದ ಆರೋಪಿಗಳು ಮೊದಲು ಪತಿಗೆ ಥಳಿಸಿದ್ದಾರೆ. ಇದಾದ ಬಳಿಕ ಅವರ ಎದುರೇ ಮರಕ್ಕೆ ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಏಳು-ಎಂಟು ಆರೋಪಿಗಳು ಭಾಗಿಯಾಗಿರುವ ಶಂಕೆ ಇದೆ ಎಂದು ರೇವಾ ಎಸ್ಪಿ ವಿವೇಕ್ ಸಿಂಗ್ ಹೇಳಿದ್ದಾರೆ. ಸಂತ್ರಸ್ತೆ ಐದು ಜನರನ್ನು ಹೆಸರಿಸಿದ್ದಾರೆ. ಎಲ್ಲಾ ಆರೋಪಿಗಳು ಸ್ಥಳದಲ್ಲಿ ಪಾರ್ಟಿ ಮಾಡುತ್ತಿದ್ದರು. ಅಲ್ಲಿ ಲಿಟ್ಟಿ, ಮಾಂಸ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಆರೋಪಿಗಳು ರೇವಾ ಜಿಲ್ಲೆಯವರಾಗಿದ್ದು ಅಕ್ಟೋಬರ್ 22ರಂದು ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!