ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗ್ರಾದಲ್ಲಿ ಪತ್ನಿಯೊಬ್ಬಳು ಪತಿಗೆ ಕ್ಷುಲ್ಲಕ ಕಾರಣಕ್ಕೆ ವಿಚ್ಛೇದನ ನೀಡಿದ್ದಾರೆ. ಮಹಿಳೆಯೊಬ್ಬಳು ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಆತನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ, ಇದಲ್ಲದೇ ವಿಚ್ಛೇದನ ಕೊಡಲು ಮುಂದಾಗಿದ್ದಾಳೆ.
ಐದು ರೂಪಾಯಿಯ ಚಿಪ್ಸ್‌ತಿನ್ನೋದಕ್ಕೂ ಇಷ್ಟುಬಾರಿ ಕೇಳಬೇಕಾ? ಮದುವೆಯಾಗಿ ಒಂದು ವರ್ಷವಷ್ಟೇ ಆಗಿದೆ, ಸಣ್ಣ ಕುರ್‌ಕುರೆಯಿಂದ ಆರಂಭವಾದ ಜಗಳ ಎಲ್ಲೆಲ್ಲಿಗೋ ಹೋಗಿದೆ. ಮಹಿಳೆ ಕಳೆದ ಒಂದೂವರೆ ತಿಂಗಳಿನಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದು, ಇತ್ತೀಚೆಗಷ್ಟೇ ಆಕೆ ತನ್ನ ಗಂಡನ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಳು. ಮಹಿಳೆಯ ದೂರನ್ನು ಫ್ಯಾಮಿಲಿ ಕೌನ್ಸೆಲಿಂಗ್ ಸೆಲ್‌ಗೆ ವರ್ಗಾಯಿಸಲಾಗಿದ್ದು,ಪತಿ-ಪತ್ನಿಯನ್ನು ಕೌನ್ಸೆಲಿಂಗ್‌ಗಾಗಿ ಸೆಲ್‌ಗೆ ಕರೆಸಲಾಗಿತ್ತು. ಈ ವೇಳೆ ಇವರಿಬ್ಬರ ನಡುವಿನ ಜಗಳಕ್ಕೆ 5 ರೂ. ಕುರ್‌ಕುರೆ ಕಾರಣ ಎಂದು ತಿಳಿದುಬಂದಿದೆ.