ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಡ್​ಗಳ ಅಕ್ರಮ​ ಬ್ಲಾಕಿಂಗ್​ ದಂಧೆ: ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಎಂದ ಸಿಎಂ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಕೊವಿಡ್ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್​ಗಳ ಅಕ್ರಮ​ ಬ್ಲಾಕಿಂಗ್​ ದಂಧೆಯಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸಂಸದ ತೇಜಸ್ವಿ ಸೂರ್ಯ ಈ ದಂದೆಯನ್ನು ಬಯಲಿಗೆಳೆದಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಈ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ, ಬಿಬಿಎಂಪಿ ಕೊವಿಡ್ ವಾರ್ ರೂಂನಲ್ಲಿ ಏಜೆನ್ಸಿಯವರು ಹೋಂ ಐಸೋಲೇಶನ್​ನಲ್ಲಿ ಇರುವವರ ಹೆಸರಿನಲ್ಲಿ ಬೆಡ್ ಬ್ಲಾಕ್ ಮಾಡುತ್ತಿದ್ದಾರೆ. ಬೆಡ್​ನ ಕೃತಕ ಅಭಾವ ಸೃಷ್ಟಿಸಿ 4 ಸಾವಿರಕ್ಕೂ ಹೆಚ್ಚು ಬೆಡ್​ಗಳ ಅವ್ಯವಹಾರ ಬೆಂಗಳೂರಿ‌ನಾದ್ಯಂತ ನಡೆಯುತ್ತಿದೆ. ಓರ್ವ ವ್ಯಕ್ತಿಯ ಹೆಸರಿನಲ್ಲಿ 12 ಆಸ್ಪತ್ರೆಗಳಲ್ಲಿ ಬೆಡ್ ಬುಕ್ಕಿಂಗ್ ಆಗಿದೆ. ರಾತ್ರೋರಾತ್ರಿ ಈ ಅವ್ಯವಹಾರ ನಡೆಯುತ್ತಿದೆ. ಇದು ಭ್ರಷ್ಟಾಚಾರ ಅಲ್ಲ, ಕೊಲೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss