WEATHER | ಕೆಲವೇ ದಿನಗಳಲ್ಲಿ ಬದಲಾಗಲಿದೆ ರಾಜ್ಯದ ಚಿತ್ರಣ, ಈ ಜಿಲ್ಲೆಗಳಲ್ಲಿ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಬಿಸಿಲಿನಿಂದ ಹೈರಾಣಾಗಿರುವ ಜನತೆ ಇನ್ನೇನು ಕೆಲವೇ ದಿನಗಳಲ್ಲಿ ತಂಪಿನ ಮಳೆ ವಾತಾವರಣ ಕಾಣಲಿದ್ದಾರೆ.

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್​ 8ರ ಬಳಿಕ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್​ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!