ಹೊಸದಿಗಂತ ಡಿಜಿಟಲ್ ಡೆಸ್ಕ್:
ಕತಾರ್ನಲ್ಲಿ (Qatar) ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ(Death Row) ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಯನ್ನು ಭಾರತದ ರಾಯಭಾರಿ ಭೇಟಿಯಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ,. ನಮ್ಮ ರಾಯಭಾರಿ ಡಿಸೆಂಬರ್ 3 ರಂದು ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು ಭೇಟಿಯಾಗಲು ಕಾನ್ಸುಲರ್ ಪ್ರವೇಶವನ್ನು ಪಡೆದರು ಎಂದುಹೇಳಿದ್ದಾರೆ.
ಈ ವೇಳೆ ಮರಣದಂಡನೆಯ ವಿರುದ್ಧ ಭಾರತದ ಮೇಲ್ಮನವಿ ಬಗ್ಗೆ ಮಾತನಾಡಿದ ಬಾಗ್ಚಿ,ಇದುವರೆಗೆ ಎರಡು ವಿಚಾರಣೆಗಳು ನಡೆದಿವೆ (ಇವುಗಳು ನವೆಂಬರ್ 23 ಮತ್ತು ನವೆಂಬರ್ 30 ರಂದು ನಡೆದವು). ನಾವು ವಿಷಯವನ್ನು ಹತ್ತಿರದಿಂದ ಫಾಲೋ ಮಾಡುತ್ತಿದ್ದೇವೆ. ಎಲ್ಲಾ ಕಾನೂನು ಮತ್ತು ದೂತಾವಾಸದ ಸಹಾಯವನ್ನು ನೀಡುತ್ತಿದ್ದೇವೆ. ಇದು ಸೂಕ್ಷ್ಮ ಸಮಸ್ಯೆ. ಆದರೆ ನಾವು ಏನು ಮಾಡಬಹುದೋ ಅದನ್ನು ಮಾಡುತ್ತೇವೆ ಎಂದಿದ್ದಾರೆ.
ಎಂಟು ನಾವಿಕರನ್ನುಕಳೆದ ವರ್ಷ ಆಗಸ್ಟ್‌ನಲ್ಲಿ ಆ ದೇಶದ ಗುಪ್ತಚರ ಸಂಸ್ಥೆಯು ಗೂಢಚಾರಿಕೆಗಾಗಿ ಬಂಧಿಸಿತ್ತು. ಕತಾರ್‌ನ ಎಮಿರ್ ಶೇಖ್ ತಮೀಮ್ ನಿನ್ ಹಮದ್ ಅವರನ್ನು ದುಬೈನಲ್ಲಿ ಸಿಒಪಿ 28 (ಶೃಂಗಸಭೆ) ಹೊತ್ತಲ್ಲಿ ಪ್ರಧಾನಿ ಮೋದಿ ಭೇಟಿಯಾಗಿದ್ದರುಒಟ್ಟಾರೆ ದ್ವಿಪಕ್ಷೀಯ ಬಾಂಧವ್ಯ ಹಾಗೂ ಭಾರತೀಯ ಸಮುದಾಯದ ಯೋಗಕ್ಷೇಮದ ಕುರಿತು ಅವರು ಉತ್ತಮ ಸಂವಾದ ನಡೆಸಿದರು ಎಂದು ಬಾಗ್ಚಿ ಹೇಳಿದ್ದಾರೆ
ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂಧಿತ ನೌಕಾ ಸಿಬ್ಬಂದಿಗಳು.